Police Bhavan Kalaburagi

Police Bhavan Kalaburagi

Thursday, August 1, 2019

KALABURAGI DISTRICT REPORTED CRIMS

ಮಟಕಾ ಜೂಜಾಟದಲ್ಲಿ ನಿರತವನ ಬಂಧನ :
ಅಫಜಲಪೂರ ಠಾಣೆ : ದಿನಾಂಕ 31-07-2019 ರಂದು  ಅಫಜಲಪೂರ ಠಾಣಾ ವ್ಯಾಪ್ತಿಯ  ಮಣ್ಣೂರ ಗ್ರಾಮದ ಊರೊಳಗಿನ ಯಲ್ಲಮ್ಮ ದೇವಸ್ಥಾನದ ಮುಂದೆ ಸಾರ್ವಜನಿಕ ಸ್ಥಳದಲ್ಲಿ ಒಬ್ಬ ವ್ಯೆಕ್ತಿ ನಿಂತುಕೊಂಡು ಹೊಗಿ ಬರುವ ಜನರಿಗೆ 1 ರೂಪಾಯಿಗೆ 80 ರೂಪಾಯಿ ಗೆಲ್ಲಿರಿ ಅಂತಾ ಅನ್ನುತ್ತಾ ಸಾರ್ವಜನಿಕರ ಮನವೂಲಿಸಿ ಅವರಿಂದ ಹಣ ಪಡೆದು, ಅವರಿಗೆ ಅಂಕಿ ಸಂಖ್ಯೆ ಬರೆದ ಮಟಕಾ ಚೀಟಿಗಳನ್ನು ಕೊಟ್ಟು, ಮಟಕಾ ಬರೆದುಕೊಳ್ಳುತ್ತಿದ್ದಾನೆ  ಅಂತ ಮಾಹಿತಿ ಬಂದ ಮೇರೆಗೆ  ಪಿ.ಎಸ್.ಐ. ಅಫಜಲಪೂರ ಹಾಗು ಸಿಬ್ಬಂದಿ ಮತ್ತು ಪಂಚರೊಂದಿಗೆ ಮಣ್ಣೂರ ಗ್ರಾಮಕ್ಕೆ ಹೋಗಿ ಗುಡಿಯಿಂದ ಸ್ವಲ್ಪ ದೂರದಲ್ಲಿ ನಮ್ಮ ವಾಹನವನ್ನು ನಿಲ್ಲಿಸಿ ಅಲ್ಲಿಂದ ನಡೆದುಕೊಂಡು ಹೋಗಿ ಯಲ್ಲಮ್ಮ ಗುಡಿಯ ದೇವಸ್ಥಾನದ ಮರೆಯಲ್ಲಿ ನಿಂತು  ನೋಡಲು, ದೇವಸ್ಥಾನದ ಮುಂದೆ ಸಾರ್ವಜನಿಕ ಸ್ಥಳದಲ್ಲಿ ಒಬ್ಬ ವ್ಯೆಕ್ತಿ ನಿಂತುಕೊಂಡು ಹೋಗಿ ಬರುವ ಜನಗಳಿಗೆ ಇದು ಕಲ್ಯಾಣ ಮಟಕಾ 1 ರೂಪಾಯಿಗೆ 80 ರೂಪಾಯಿ ಗೆಲ್ಲಿರಿ ಅಂತಾ ಕರೆದು, ಜನರಿಂದ ಹಣ ಪಡೆದು ಅವರಿಗೆ ಅಂಕಿ ಸಂಖ್ಯೆ ಬರೆದುಕೊಟ್ಟು, ಮಟಕಾ ಬರೆದುಕೊಳ್ಳುತ್ತಿದ್ದನು . ಆಗ ದಾಳಿ ಮಾಡಿ ಹಿಡಿದು ಸದರಿಯವನ ಹೆಸರು ವಿಳಾಸ ವಿಚಾರಿಸಿ ಅಂಗ ಶೋದನೆ ಮಾಡಲಾಗಿ  ಅಂಬ್ರಪ್ಪ ತಂದೆ ಚಂದಪ್ಪ ಡೊಂಬರ ಸಾ||ಮಣ್ಣೂರ ಅಂತಾ ತಿಳಿಸಿದ್ದು, ಸದರಿಯವನ ವಶದಿಂದ ಮಟಕಾ ಜೂಜಾಟಕ್ಕೆ ಸಂಬಂಧ ಪಟ್ಟ 720/- ರೂಪಾಯಿ ನಗದು ಹಣ ಹಾಗೂ ಅಂಕಿ ಸಂಖ್ಯೆ ಬರೆದ ಒಂದು ಮಟಕಾ ಚೀಟಿ ಹಾಗೂ ಒಂದು ಪೆನ್ನ ದೊರೆತವು, ಸದರಿಯವುಗಳನ್ನು  ಜಪ್ತಿ ಮಾಡಿಕೊಂಡು ಸದರಿಯವನೊಂದಿಗೆ ಅಫಜಲಪೂರ ಠಾಣೆಗೆ ಬಂದು ಠಾಣೆಯ ಗುನ್ನೆ ನಂ 134/2019 ಕಲಂ 78 (3) ಕೆ.ಪಿ ಆಕ್ಟ ನೇದ್ದರಲ್ಲಿ ಪ್ರಕರಣ ದಾಖಲಿಸಲಾಗಿದೆ.

No comments: